ರೈಲ್ವೆ ಗೇಟಿಗೆ ಹಾನಿ ಮಾಡಿದ ಒಂಟಿ ಕಾಡಾನೆ ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Share with


ಸಕಲೇಶಪುರ: ತಾಲೂಕಿನ ಹೊಸೂರು ಸಮೀಪದ ಪ್ರದೇಶದಲ್ಲಿ ಒಂಟಿ ಕಾಡಾನೆಯೊಂದು ರೈಲ್ವೆ ಗೇಟಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ಕಾಡಾನೆಯ ಹಾವಳಿಯಿಂದ ಸ್ಥಳೀಯರು ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ವಲಯ ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ರೈತರು ಜಮೀನುಗಳಿಗೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಬೆಳೆ ಮತ್ತು ಆಸ್ತಿಪಾಸ್ತಿಗಳಿಗೆ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


Share with

Tags:

Leave a Reply

Your email address will not be published. Required fields are marked *