ಮಾಜಿ ಮುಖ್ಯಮಂತ್ರಿ, ಹೆಮ್ಮೆಯ ರಾಜಕಾರಣಿ ಎಸ್ ಎಂ ಕೃಷ್ಣ ವಿಧಿವಶ

Share with

ಬೆಂಗಳೂರು: ಮಾಜಿ ಸಿಎಂ ಎಸ್.‌ ಎಂ ಕೃಷ್ಣ  (92)  ಮಂಗಳವಾರ(ಡಿ .10)ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ (ಡಿ.11 ರಂದು) ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.


Share with

Leave a Reply

Your email address will not be published. Required fields are marked *