ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ನಟ ಕೆ ಶಿವರಾಮ್ ವಿಧಿವಶ

Share with

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಅವರು ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್

ಫೆ.28ರಂದು ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಫೆ.29ರಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮ್ ಅವರು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

1993ರಲ್ಲಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.


Share with

Leave a Reply

Your email address will not be published. Required fields are marked *