ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಐಎಂ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತಿದೆ. 101 ವರ್ಷದ ಅಚ್ಯುತಾನಂದನ್ ಅವರಿಗೆ 2 ದಿನಗಳ ಹಿಂದೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಲ್ಲಿ ತಜ್ಞ ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯ ಮೇಲುಸ್ತುವಾರಿ ವಹಿಸಿದ್ದು ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್, ಆರೋಗ್ಯ ಸ್ಥಿರವಾಗಿದ್ದು ಅಲ್ಪ ಪ್ರಮಾಣದ ಚೇತರಿಕೆ ಕಂಡು ಬಂದಿದೆ ಎಂದು ಹೇಳಿದ್ದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಾಂಗ್ರೆಸ್ ನಾಯಕ ವಿ.ಡಿ.ಸತೀಶನ್ ಇತರ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.