ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Share with

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಜು.18ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

2004-06 ಮತ್ತು 2011-16ರ ಅವಧಿಯಲ್ಲಿ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 27ನೇ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗುವ ಮೂಲಕ 1970ರಲಿ ರಾಜಕೀಯ ರಂಗ ಪ್ರವೇಶಿಸಿದ ಇವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್‌ಬಿ ಪದವಿ ಪೂರೈಸಿದ್ದರು. ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾಗಿದ್ದರು.


Share with

Leave a Reply

Your email address will not be published. Required fields are marked *