ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.
ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿಯಂತೆ ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾವುದೇ ಪದಾಧಿಕಾರಿಗಳು ಅಥವಾ ಕಾರ್ಯಕರ್ತರ ವರ್ತನೆಯನ್ನು ಸಹಿಸಲಾಗದು. ಪಕ್ಷದ ಸಿದ್ಧಾಂತದಡಿ ಎಲ್ಲರೂ ಸಮಾನರಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ.