ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತೆ ಅನಾರೋಗ್ಯದ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆ ಅವರು ರಾಜ್ಯಸಭೆ ಕಲಾಪಗಳಲ್ಲಿ ಭಾಗಿಯಾಗುತ್ತಿಲ್ಲ.
ಆರೋಗ್ಯ ಹದಗೆಟ್ಟ ಕಾರಣ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿಯೂ ಹೆಚ್ಚು ಹೊತ್ತು ಭಾಗವಹಿಸಿರಲಿಲ್ಲ. ಸೊಂಟ ನೋವಿನ ಕಾರಣ ಜಾಸ್ತಿ ಸಮಯ ಕುಳಿತುಕೊಳ್ಳಲು ಆಗುವುದಿಲ್ಲ. ಹೀಗಾಗಿ, ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದೇನೆ. ನೋವು ಕಡಿಮೆಯಾದರೆ ಬುಧವಾರ ಕಲಾಪದಲ್ಲಿ ಭಾಗಿಯಾಗಿರುವುದಾಗಿ ದೇವೇಗೌಡರು ತಿಳಿಸಿದ್ದಾರೆ.