ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ಘಟನೆ ಇಂದು(ಅ.4) ನಡೆದಿದ್ದು, ಗಂಭೀರ ಗಾಯಗೊಂಡಿದ್ದ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದ್ದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎಂದು ಗುರುತಿಸಲಾಗಿದೆ. ಹರ್ಷದ್ ಮತ್ತು ಪವನ್ ಹಾಗೂ ಇನ್ನೋರ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಗಾಯಗೊಂಡವರಲ್ಲಿ ಇಬ್ಬರು ಉತ್ತರ ಭಾರತದ ಮೂಲದವರು ಮತ್ತು ಇಬ್ಬರು ಮಂಗಳೂರಿನವರು ಎಂದು ಗುರುತಿಸಲಾಗಿದೆ.