ಮಂಗಳೂರು: ಯು.ಕೆ.ಯಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ 16 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಿಯಾಲಬೈಲಿನಲ್ಲಿನ ಯು.ಕೆ. ರೀಗಲ್ ಅಕಾಡೆಮಿ ಎನ್ನುವ ಸಂಸ್ಥೆ ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಫೇಸ್‌ಬುಕ್‌ನಲ್ಲಿ ಜಾಹೀರಾತು ಪ್ರಕಟಿಸಿತ್ತು. ಇದನ್ನು ನೋಡಿದ ದೂರುದಾರರು ಮಗನಿಗೆ ಯು.ಕೆ.ನಲ್ಲಿ ಉದ್ಯೋಗಕ್ಕಾಗಿ ವೀಸಾ ಪಡೆಯಲು ಸಂಪರ್ಕಿಸಿದ್ದಾರೆ. ಈ ವೇಳೆ 16 ಲಕ್ಷ ನೀಡಿದರೆ 90 ದಿನದಲ್ಲಿ ವೀಸಾ ಮಾಡಿಕೊಡುವ ಭರವಸೆ ಕೊಟ್ಟಿದ್ದಾರೆ.
ಅದರಂತೆ ಕೊಡಿಯಾಲಬೈಲಿನ ಸಂಸ್ಥೆಯ ಕಚೇರಿಗೆ ಹೋದಾಗ ಸೂರಜ್ ಜೋಸೆಫ್ 2 ಲಕ್ಷ ರೂ. ನಗದು ಮುಂಗಡವಾಗಿ ಪಡೆದು ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಅನಂತರ 16 ಲಕ್ಷ ರೂ. ನೀಡುವಂತೆ ಪದೇ ಪದೆ ಒತ್ತಾಯಿಸಿದ್ದು, ಕೊಡದಿದ್ದರೆ ವೀಸಾ ರದ್ದಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾನೆ.