
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.3 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪದಡಿ ಪುತ್ತೂರು ಮೂಲದ ಬಿಜೆಪಿಯಲ್ಲಿದ್ದ ಸ್ಥಳೀಯ ಮುಖಂಡನ ವಿರುದ್ಧ ದೂರು ದಾಖಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಹೇಳಿಕೊಂಡು ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಲಾಗಿರುವ ಕುರಿತು ವಿಜಯಪುರದ ರೇವಣ್ಣ ಸಿದ್ದಪ್ಪ ಮತ್ತು ಪುತ್ತೂರಿನ ಶೇಖರ್ ಎನ್.ಪಿ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.




