ಶಕ್ತಿ ಯೋಜನೆ, ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಖಾಸಗಿ ಸಾರಿಗೆ ಉದ್ಯಮ ಸಂಕಷ್ಟದಲ್ಲಿದ್ದು, ಖಾಸಗಿ ಬಸ್, ಕ್ಯಾಬ್, ಆಟೋಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಇವರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿರುವ ಸರ್ಕಾರ ಪರಿಹಾರ ಘೋಷಿಸುವ ಸಾಧ್ಯತೆಯಿದೆ.
ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಿಎಂ ಪರಿಹಾರ ಕ್ರಮ ಹಾಗೂ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ. 18ರವರೆಗೆ ಗಡುವು ವಿಧಿಸಿರುವ ಸಂಘಟನೆಗಳು ಬಂದ್ ಘೋಷಿಸುವ ಎಚ್ಚರಿಕೆ ನೀಡಿದ್ದಾರೆ.