ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕಗಳು, ರೆಡ್ ಕ್ರಾಸ್ ಘಟಕ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ರೋಟರಿ ಕ್ಲಬ್ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ, ಎ. ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ದೇರಳ ಕಟ್ಟೆ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಕಾಲೇಜಿನ ಅಧ್ಯಕ್ಷ ರಾದ ಶ್ರೀ ಜಯಂತ್ ನಡು ಬೈಲ್ ದೀಪ ಬೆಳಗಿಸಿ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎ. ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ನ ಡಾ. ದಿಶಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ರಾದ ಶ್ರೀ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ. ಎ. ಉಪಸ್ಥಿತರಿದ್ದರು. ಉಚಿತದಂತ ಚಿಕಿತ್ಸಾ ಶಿಬಿರದ ಸದುಪಯೋಗವನ್ನು ವಿದ್ಯಾರ್ಥಿಗಳು ಮತ್ತು ಬೋಧಕ,ಬೋಧಕೇತರ ಸಿಬ್ಬಂದಿ ವರ್ಗದವರು ಪಡೆದರು. ಕುಮಾರಿ ರಮ್ಯ ಪ್ರಾರ್ಥಿಸಿ, ಕುಮಾರಿ ವಿಂಧು ಶ್ರೀ ನಿರೂಪಿಸಿದರು.