

ಸಕಲೇಶಪುರ: ಮೇ 15 ರಂದು ತಾಲೂಕು ಪಂಚಾಯತಿ ಸಭಾಂಗಣ ಭವನದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯವಯೋಶ್ರೀಯೋಜನೆ.ಕಾರ್ಯಕ್ರಮದಲ್ಲಿ ವೃದ್ಧರಿಗೆ ಅಗತ್ಯವಾಗಿರುವ ಸಾಧನಗಳನ್ನು ಉಚಿತವಾಗಿ ವಿತರಿಸಲಾಯಿತು.
ಸಕಲೇಶಪುರ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ತಾಲೂಕಿನ ಒಟ್ಟು 890 ಹಿರಿಯ ನಾಗರಿಕರಿಗೆ ಉಚಿತ ಸಲಕರಣೆಗಳನ್ನು ಶಾಸಕರಾದ ಸಿಮೆಂಟ್ ಮಂಜುನಾಥ್ ಅವರು ವಿತರಿಸಿದರು.
ನಂತರ ಮಾತನಾಡಿದ ಶಾಸಕರು ಸಿಮೆಂಟ್ ಮಂಜುನಾಥ್ ನಾಗರಿಕರನ್ನು ಪ್ರತಿಯೊಬ್ಬರು ಗೌರವಿಸಬೇಕು, ಇತ್ತೀಚಿನ ದಿನಗಳಲ್ಲಿ ಹಿರಿಯರನ್ನು ನಿರ್ಲಕ್ಷಿಸಲಾಗುತ್ತಿದ್ದು, ಸರ್ಕಾರವು ಹಿರಿಯರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ.
ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಲಕರಣೆಗಳ ವಿತರಣೆ ಸಂಬಂಧ ಕೇಂದ್ರ ಸರ್ಕಾರದಿಂದ ಸಮೀಕ್ಷೆ ನಡೆಸಲಾಗಿತ್ತು. ವಯೋಸಹಜ ಅಂಗವಿಕಲತೆಯಿಂದಾಗುವ ಸಮಸ್ಯೆಗಳನ್ನು ನಿವಾರಿಸಲು ಸಲಕರಣೆಗಳು ಸಹಕಾರಿಯಾಗಲಿವೆ. ಹಿರಿಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆಗ ಮಾತ್ರ ಯೋಜನೆ ಸಫಲವಾಗಲಿದೆ ಎಂದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಧಿಕಾರಿ ಅಭಿಷೇಕ್, ತಾಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ ಗಂಗಾಧರ್, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಆದಿತ್ಯ ,ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.




