ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಅತ್ಯಾಚಾರ ನಡೆಸಿ ಆಕೆ ಆರು ತಿಂಗಳ ಗರ್ಭಿಣಿಯಾದ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಿ ಮೂವರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್ (26) ಫಾರೂಕ್(19) ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ.
ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.