ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Share with

ಉಡುಪಿ: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಐವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 5 ಗಂಟೆಗೆ ಕಾರ್ಕಳ ನೀರೆಬೈಲೂರಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.
ಸಂಸ್ಥಾಪಕರ ನಿಧನ ಹಿನ್ನೆಲೆಯಲ್ಲಿ ಉಡುಪಿಯ ಗೀತಾಂಜಲಿ ಸಿಲ್ಕ್, ನ್ಯೂ ಶಾಂತಿ ಸಾಗರ್ ರೆಸ್ಟೋರೆಂಟ್, ಶಾಂತಿ ಸಾಗರ್, ಮಣಿಪಾಲದ ಶ್ರೀಶಾಂತಿ ಸಾಗರ್ ಹೊಟೇಲ್‌ಗಳಿಗೆ ರಜೆ ನೀಡಲಾಗಿದೆ.


Share with

Leave a Reply

Your email address will not be published. Required fields are marked *