ಬಾಲಕಿಯೋರ್ವಳು ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ

Share with

ಬೆಂಗಳೂರು: ಅಪಾರ್ಟ್ಮೆಂಟ್ ನಿಂದ ಬಾಲಕಿಯೋರ್ವಳು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.

ವಿಜಯಲಕ್ಷ್ಮಿ (17) ವರ್ಷ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ತಿಳಿದು ಬಂದಿದೆ. ಬೆಂಗಳೂರಿನ ಬ್ಯಾಟರಾಯನಪುರ ನಿವಾಸಿಯಾಗಿದ್ದ ಈಕೆ ಇಲ್ಲಿನ ಬ್ರೈಡ್ ಅಪಾರ್ಟ್​​ಮೆಂಟ್​​ನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಖಿನ್ನತೆಗೊಳಗಾಗಿದ್ದ ಯುವತಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಬಂದಿದ್ದು, ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ವೇಳೆ ಸ್ಥಳೀಯರೊಬ್ಬರು ರಕ್ಷಣೆ ಮಾಡಿ ಪೋಷಕರಿಗೆ ಪೋನ್ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *