ಬೀದರ್: ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಂಧ್ಯಾರಾಣಿ ಸಂಜುಕುಮಾರ ಮೃತ ಬಾಲಕಿಯಾಗಿದ್ದು, ಬಾಲಕಿ ಗುರುವಾರ ಈದ್ ಮಿಲಾದ್ ರಜೆ ಕಾರಣ ಮನೆಯಲ್ಲಿದ್ದಳು. ಹೆತ್ತವರು ಕೆಲಸಕ್ಕೆ ತೆರಳಿದ್ದು, ಬಾಲಕಿ ಆಟ ಆಡುವಾಗ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಆಕೆಯ ತಲೆಗೆ ತೀವ್ರವಾಗಿ ಗಾಯವಾಗಿತ್ತು ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಮದಕಟ್ಟಿ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಘಟನೆಯು ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.