
ವಿಟ್ಲ: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಬಸ್ ಸ್ಟಾಂಡ್ ಒಂದರಲ್ಲಿ ಸಲುಗೆಯಾಗಿ ವರ್ತಿಸುತ್ತಿದ್ದ ವೇಳೆ ಸಾರ್ವಜನಿಕರು ವಿಚಾರಿಸಿ ಮೂವರನ್ನು ಪೊಲೀಸರಿಗೊಪ್ಪಿಸಿದ ಘಟನೆ ಪೆರುವಾಯಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೂವರೂ ಕೇರಳ ಮೂಲದವರೆನ್ನಲಾಗಿದ್ದು, ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿರುವಾಗ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.