ಕುಂಬಳೆ: ಅನಂತಪುರ ಶ್ರೀ ಅನಂತಪದ್ಮನಾಭ ಕ್ಷೇತ್ರಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಚೆಯರ್ ಮೆನ್ ಕುಶಲಪ್ಪ ಕಣ್ಣೂರ್ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಯಪ್ರಕಾಶ್ ಶೆಟ್ಟಿ ನಾರಾಯಣಮಂಗಲ, ಪ್ರಸಾದ್ ಕುಮಾರ್ ಕೃಷ್ಣ ನಗರ ಕುಂಬಳೆ, ಸತೀಶ್ ಕುಮಾರ್, ಹರೀಶ್ ಉಪಸ್ಥಿತರಿದ್ದರು.

ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ಬಗ್ಗೆ ಅವಲೋಕಿಸಿ, ಮಾಹಿತಿ ಪಡೆದು, ಮುಂದಿನ ಕೆಲಸ ಕಾರ್ಯಗಳಿಗೆ ತಮ್ಮಿಂದಾಗುವ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಹಾಲಿಂಗೇಶ್ವರ ಮಾಸ್ಟರ್ ಮಾಹಿತಿ ನೀಡಿದರು. ಈ ಕೆಲಸಕಾರ್ಯಗಳಿಗೆ ಸಹಾಯ ಹಸ್ತ ನೀಡುವಂತೆ ಮನವಿ ಕೂಡಾ ಸಲ್ಲಿಸಿದರು. ಈ ವೇಳೆ ಜೀರ್ಣೋದ್ಧಾರ ಸಮಿತಿ ಸದಸ್ಯರು ಜತೆಗಿದ್ದರು.