ಉಡುಪಿ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4ನೇ ಅಡ್ಡರಸ್ತೆಯಲ್ಲಿ ನಡೆದಿದೆ.
ಅ.8ರಂದು ಅಮ್ಮುಂಜೆ ವಿಠಲ್‌ದಾಸ್ ನಾಯಕ್ ಎಂಬವರ ಮನೆಯ ಬಾಗಿಲುಗಳ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾಗಳ ಬೀಗಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ ತೂಕದ ಸುಮಾರು 66,36,300 ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಒಟ್ಟು 7,450 ಗ್ರಾಂ ತೂಕದ 6,70,500ರೂ. ಮೌಲ್ಯದ ಬೆಳ್ಳಿಯ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ದಾಖಲಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.