ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮೂವರು ಪ್ರಯಾಣಿಕರಿಂದ 969ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಡಿ.11ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ ಮೂವರು ಪ್ರಯಾಣಿಕರನ್ನು ತಡೆದು ತೀವ್ರ ತಪಾಸಣೆಗೆ ಒಳಪಡಿಸಿದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60,07,800 ರೂಪಾಯಿ ಎಂದು ತಿಳಿದು ಬಂದಿದೆ.
ಇಬ್ಬರು ಪ್ರಯಾಣಿಕರು ಶೂಗಳ ಅಡಿಭಾಗದೊಳಗೆ ಹಳದಿ ಬಣ್ಣದ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದು, ಇನ್ನೊಬ್ಬ ಪ್ರಯಾಣಿಕ ಚಾಕೊಲೇಟ್‌ನಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.