ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಮಾಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಪ್ರತಿ ತಿಂಗಳು 10 ರಿಂದ 15 ಸಾವಿರ ಹೊಸಬರು ಸೇರ್ಪಡೆಯಾಗುತ್ತಿದ್ದಾರೆ. ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಇಲ್ಲ. ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ಜಿಲ್ಲಾ & ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯ ಆಗಬೇಕು ಎಂದು ಕೇಂದ್ರದ ನಿಯಮವಿದೆ.
ಇದರಿಂದ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.