
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಭೈಲು ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿ ನಿರ್ಮಾಣದ ವೇಳೆ 12ನೇ ಶತಮಾನದ ಎನ್ನಲಾದ ಶ್ರೀ ಗೋಪಾಲಕೃಷ್ಣ ದೇವರ ಭಗ್ನ ವಿಗ್ರಹ ಹಾಗೂ ಇನ್ನಿತರ ಪರಿಕರಗಳು ಆದಿತ್ಯವಾರದಂದು ಪತ್ತೆಯಾಗಿವೆ.

ದೇವಾಲಯವಿತ್ತೆನ್ನಲಾದ ದೇವರಗುಡ್ಡೆ ಪ್ರದೇಶದಲ್ಲಿ ಬೆಳ್ತಂಗಡಿ ಶಾಸಕರ ಮುತುವರ್ಜಿಯಿಂದ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆಯನ್ನು ನೀಡಲಾಗಿದ್ದು, ಈ ಸಂಬಂಧ 5 ದಿನಗಳ ಹಿಂದೆ ಸ್ಥಳದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗಿತ್ತು.
ಆದಿತ್ಯವಾರ ಬಾವಿ ನಿರ್ಮಾಣಕ್ಕೆ ಚಾಲನೆ ನೀಡಿದಾಗ ಸುಮಾರು 15 ಅಡಿ ಆಳದಲ್ಲಿ ಶ್ರೀ ಗೋಪಾಲಕೃಷ್ಣ ದೇವರ ಭಗ್ನ ಸ್ಥಿತಿಯ ವಿಗ್ರಹ, ದೀಪದ ಕಲ್ಲು, ದೇವಾಲಯದ ಅಡಿಪಾಯದ ಕುರುಹು, ಪತ್ತೆಯಾಗುವ ಮೂಲಕ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಮೂಡಿಬಂದ ವಿಚಾರಗಳು ಸತ್ಯವೆಂದು ದೃಢಪಟ್ಟಿವೆ.
ಲಭ್ಯ ಮೂರ್ತಿ ಸಹಿತ ಪರಿಕರಗಳನ್ನು ಶ್ರದ್ಧಾ ಭಕ್ತಿಯಿಂದ ಸಂರಕ್ಷಿಸಲಾಗಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಉಪಸ್ಥಿತರಿದ್ದರು.




