ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ಮಾ.13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕ್ರಿಯಾಶೀಲರಾಗಿ ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿದ್ದ ಗೋಪಿನಾಥ್ ಶೆಟ್ಟಿಯವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದು 2ಗಂಟೆ ವೇಳೆಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಇವರು ಪೆರುವಾಯಿ ನಿವಾಸಿಯಾಗಿದ್ದು ಪ್ರಸ್ತುತ ಬಲಮುರಿಯ ನಂದಿಲದಲ್ಲಿ ವಾಸವಿದ್ದರು. ಇದೀಗ ಮೃತ ದೇಹವನ್ನು ಪೆರುವಾಯಿ ಯಲ್ಲಿರುವ ನಿವಾಸಕ್ಕೆ ಕೊಂಡಯ್ಯಲಾಗಿದೆ. ಮೃತರು ಪತ್ನಿ, ಓರ್ವ ಪುತ್ರನನ್ನು ಹಾಗೂ ಅಪಾರ ಶಿಷ್ಯವೃಂದದವರು, ಬಂಧು ಬಳಗವನ್ನು ಅಗಲಿದ್ದಾರೆ.