ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿದನ; ಇಂದು ಸರಕಾರಿ ರಜೆ ಘೋಷಣೆ, 7 ದಿನಗಳ ಕಾಲ ಶೋಕಾಚರಣೆ

Share with

ದೆಹಲಿ: ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ ಅವರು ಗುರುವಾರ(ಡಿ.26) ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು ಮಾಡುತ್ತಿದ್ದಂತೆ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ.


Share with

Leave a Reply

Your email address will not be published. Required fields are marked *