ಬಾನು ಮುಸ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಮೈಸೂರಿನಲ್ಲಿ ತಿಳಿಸಿದ್ದಾರೆ.

ಇನ್ನು, ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದು ಹೇಳಿದ್ದಾರೆ.




