ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ..!

Share with

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಶಂಕರ ಮಾಡನ್ನೂರು ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.

ಇವರು ಸಾಲ ಮಾಡಿ ಜಾಗ ಖರೀದಿ ಮಾಡಿದ್ದು, ಸಾಲ ಮರುಪಾವತಿ ಚಿಂತೆಯಲ್ಲಿ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪತ್ನಿ ವನಿತಾ ಅವರು ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್‌ನೋಟ್ ಬರೆದಿಟ್ಟಿದ್ದದ್ದು ಪತ್ತೆಯಾಗಿದೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *