ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು 2025-26ನೇ ಸಾಲಿನ ಉದ್ಯೋಗಿನಿ, ಚೇತನಾ, ಧನಶ್ರೀ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ 3 ಲಕ್ಷದವರೆಗೂ ಸಾಲ ಸೌಲಭ್ಯ ನೀಡಲಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಅರ್ಹ ಮಹಿಳೆಯರು ಸೇವಾ ಸಿಂಧು ಪೋರ್ಟಲ್ನಲ್ಲಿ ಜನವರಿ 15’ರೊಳಗಾಗಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.




