ಗೃಹ ಲಕ್ಷ್ಮೀ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣ ಡಿ.31ರ ಮೊದಲಾಗಿ ಫಲಾನುಭವಿಗಳ ಖಾತೆಗೆ ಜಮೆ ಅಗುವ ಸಾಧ್ಯತೆ ಇದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ವಿಧಾನಸಭೆಯಲ್ಲೇ ಮಾಹಿತಿ ನೀಡಿದ್ದಾರೆ.

ಡಿ.16ರಂದು ಆರ್ಥಿಕ ಇಲಾಖೆಯಿಂದ ಸೆಪ್ಟೆಂಬರ್ ತಿಂಗಳ ಕಂತಿನ ಹಣದ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಹಣವು ಜಮಾ ಆಗುವ ಸಾಧ್ಯತೆ ಇದೆ. ಆದರೆ ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳ ಹಣದ ಬಗ್ಗೆ ಮಾಹಿತಿ ನೀಡಲಾಗಿಲ್ಲ.




