ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶ

Share with

ಬಂಟ್ವಾಳ: ರಾಜ್ಯದ ಪ್ರತಿಯೊಬ್ಬರೂ ಕೂಡ ನಾಗರಿಕ ಜೀವನ ನಡೆಸಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೆ ತರುವ ಮೂಲಕ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಹೇಳಿದರು.

ಬಿ.ಸಿ ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಮಾ.9ರಂದು ನಡೆದ ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶ

ಅವರು ಬಿ.ಸಿ ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಮಾ.9ರಂದು ನಡೆದ ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಸಭೆ.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಅವರು ಮಾತನಾಡಿ ರಾಜ್ಯದ ಪ್ರತೀ ಜನತೆಗೆ ಸರಕಾರದ ಒಂದಲ್ಲ ಒಂದು ಗ್ಯಾರಂಟಿ ತಲುಪುತ್ತಿದೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ ಎಂದ ಅವರು ಭಾವನೆಗಳಿಂದ ಕುಟುಂಬದ ಜೀವನ ನಡೆಯುದಿಲ್ಲ. ಬದಲಾಗಿ ಬದುಕು ನಡೆಸುವ ವ್ಯವಸ್ಥೆಯನ್ನು ಮಾಡಬೇಕಾಗಿದೆ. ಅಂತಹ ಕಾರ್ಯವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ| ಮಂಜುನಾಥ ಭಂಡಾರಿ ಅವರು ಮಾತನಾಡಿ ಚುನಾವಣೆಯ ಪ್ರಣಾಳಿಕೆಗಳು ಈಡೇರಬೇಕಾದರೆ ಅದು ಕಾಯ್ದೆಗಳಾಗಿ ಹೊರ ಬರಬೇಕು, ಇಂದು ಸರಕಾರದ ಗ್ಯಾರಂಟಿ ಯೋಜನೆಗಳು ಕಾಯ್ದೆಗಳಾಗಿ ಅಧಿಕಾರಿಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯ ಆಗುತ್ತಿದೆ ಎಂದರು.

ವೇದಿಕೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್, ಸಹಾಯಕ ಆಯುಕ್ತ ರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಪಿಡಬ್ಲ್ಯುಡಿ ಎಇಇ ಜಯಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮುಮ್ತಾಜ್, ಕೌಶಲ್ಯ ಅಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿ ಪ್ರದೀಪ್ ಡಿ.ಸೋಜ, ಮೆಸ್ಕಾಂ ಎ.ಇ.ಇ.ನಾರಾಯಣ ಭಟ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ‌ನಿಯಂತ್ರಣಾಧಿಕಾರಿ ಜಯಕರ್ ಶೆಟ್ಟಿ, ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ವಿವಿಧ ಗ್ಯಾರಂಟಿ ಯೋಜನೆ ಹಾಗೂ ವಿವಿಧ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ತಹಶೀಲ್ದಾರ್ ಅರ್ಚನಾ ಡಿ. ಭಟ್ ಅವರು ಸ್ವಾಗತಿಸಿ, ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರಾದ ಜೋ ಪ್ರದೀಪ್ ಡಿಸೋಜಾ ಅವರು ವಂದಿಸಿ, ಬಾಲಕೃಷ್ಣ ಆಳ್ವ ಕೊಡಾಜೆ ಹಾಗೂ ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *