ಬೆಲೆ ಏರಿಕೆ ಕಷ್ಟ ಕಾಲದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಅತಿ ಹೆಚ್ಚು ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.

ಈ ಬಗ್ಗೆ ಬೈಎಲೆಕ್ಷನ್ ವರದಿ ನಮಗೆ ಬಂದಿದೆ ಎಂದು ಹೇಳಿದರು. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ BJPಯವರು ಟೀಕೆ ಮಾಡುತ್ತಿದ್ದಾರೆ ಎಂದಿದ್ದಾರೆ.




