ಮಂಗಳೂರು: ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯದ ಸಾಧ್ಯತೆಯಿದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.
ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದ್ದ ವಸಂತ ಬಂಗೇರ ಮಹೇಶ್ ಶೆಟ್ಟಿ ಅವರಿಗೆ ಇಬ್ಬರು ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದರು.ಇದೀಗ ಗೃಹ ಸಚಿವ ಪರಮೇಶ್ವರ್ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರಿಗೆ ಸೂಚನೆ ನೀಡಿದ್ದು, ಗನ್ ಮ್ಯಾನ್ ಒದಗಿಸುವಂತೆ ಅಧಿಕತವಾಗಿ ಆದೇಶ ಹೊರಡಿಸಿದ್ದಾರೆ