ಭದ್ರತಾ ಪಡೆ – ನಕ್ಸಲರ ಮಧ್ಯೆ ಗುಂಡಿನ ಚಕಮಕಿ..!

Share with

ಬಿಜಾಪುರ (ಛತ್ತೀಸ್‌ಗಢ): ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾವೋವಾದಿಗಳ ಪಶ್ಚಿಮ ಬಸ್ತಾರ್ ವಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲೀಯ ವಿರೋಧಿ ಕಾರ್ಯಾಚರಣೆಗೆ ಜಂಟಿ ತಂಡ ಆಗಮಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಕೂಡ ಸ್ವಯಂ ರಕ್ಷಣೆಗೆ ಗುಂಡು ಹಾರಿಸಿದ್ದಾರೆ. ಈ ಪ್ರದೆಶದಲ್ಲಿ ನಕ್ಸಲರ ಚಟುವಟಿಕೆಗಳ ಕುರಿತು ಗುಪ್ತಚರ ವರದಿ ನೀಡಿದ ಮಾಹಿತಿ ಮೇರೆಗೆ ಇಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF) ಮತ್ತು ಕೋಬ್ರಾ (CRPF ಯ ಗಣ್ಯ ಘಟಕ) ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಗುಂಡಿನ ಚಕಮಕಿ ಇನ್ನೂ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *