ಬೆಂಗಳೂರು: ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಅದಕ್ಕಾಗಿ ನಾವು ನಿರಂತರವಾಗಿ ಕಠಿಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಇಂದು ನೀವೆಲ್ಲರೂ ಸೇರಿ ಹಮ್ಮಿಕೊಂಡಿರುವ ಈ ಸಮಾವೇಶ ಸ್ವಾಗತಾರ್ಹ. ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸಲು ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ನಾಗರಿಕರು ಒಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು.




