
ಸಕಲೇಶಪುರ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಉಂಟಾದ ನೂಕುನುಗ್ಗಲಿನಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದ ಎಂಜಿನೀಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಇವರು ಅರೇಹಳ್ಳಿ ಹೋಬಳಿ ಕುಪ್ಪಗೋಡು ಗ್ರಾಮದ ಡಿ.ಟಿ. ಲಕ್ಷ್ಮಣ್ ಹಾಗೂ ಅಶ್ವಿನಿ ದಂಪತಿ ಪುತ್ರ ಭೂಮಿಕ್ (20) ಮೃತ ದುರ್ದೈವಿ. ಬೆಂಗಳೂರಿನಲ್ಲಿ ದ್ವಿತೀಯ ವರ್ಷದ ಎಂಜಿನೀಯರಿಂಗ್ ಓದುತ್ತಿದ್ದ ಭೂಮಿಕ್ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದತ್ತ ತೆರಳಿದ್ದ. ಕ್ರೀಡಾಂಗಣದ ಒಳಗೆ ಹೋಗುತ್ತಿದ್ದಾಗ ಉಂಟಾದ ನೂಕಾಟದಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಡಿ.ಟಿ. ಲಕ್ಷ್ಮಣ್ ಅವರು ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದು ಕಳೆದ 20 ವರ್ಷದಿಂದ ರಾಜಧಾನಿಯಲ್ಲೇ ವಾಸವಿದ್ದರು.
RCB ಸಂಭ್ರಮಾಚರಣೆಯನ್ನು ನೋಡಲು ಹೋದವರು ದುರಂತ ಸಾವನ್ನು ಕಂಡಿದ್ದಾರೆ. ನಿಜವಾಗಿಯೂ ಐದು ವಿಶಾದನೀಯ ಸಾವಿನ ಸಂಖ್ಯೆ 10ಕ್ಕೆ ಏರಿಕೆ.
ಬೆಂಗಳೂರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ. ಇನ್ನೂ ಹಲವರು ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.