ಕಡಬ: ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಯುವಕನೊಬ್ಬ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿಕೊಂಡು ಸಹಾಯಕ್ಕಾಗಿ ಬೊಬ್ಬಿಡುತ್ತಿರುವ ದೃಶ್ಯ ಸೋಮವಾರ ಬೆಳಗ್ಗೆ ಕಂಡುಬಂದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬಂದಿ ಯುವಕನ್ನು ರಕ್ಷಣೆ ಮಾಡಿದ್ದಾರೆ.
ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ ನದಿಯ ನಡುವೆ ಇರುವ ಪೊದೆಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಯುವಕನ ರಕ್ಷಣೆ:
ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಯುವಕನನ್ನು ಹೊಳೆಯಿಂದ ಮೇಲಕ್ಕೆ ತಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಪುತ್ತೂರು ಆಸ್ಪತ್ರೆ ಗೆ ಸಾಗಿಸಲಾಗಿದೆ.