ಶಿವಮೊಗ್ಗ: ಇಲ್ಲಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿನೋಬನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜಯಪ್ಪ ಎಂಬುವವರು ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್ ಆಗಿದ್ದು, ಅವರು ಮೂಲತಃ ಹಾವೇರಿ ಜಿಲ್ಲೆಯ ಸಾತನೂರು ಗ್ರಾಮದವರಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಜಯಪ್ಪ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದು ಜಯಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.