ಬೆಂಗಳೂರು : ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು’ ಎಂಬ ಘೋಷಣೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪ್ರಭಾಕರ್ ಟಿ. ಆದೇಶ ಹೊರಡಿಸಿದ್ದು ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು 2025-26ನೆ ಸಾಲಿನ ಆಯವ್ಯಯ ಘೋಷಿಸಲಾಗಿದ್ದು, ಅದರಂತೆ ಕ್ರಮ ವಹಿಸಲಾಗುತ್ತಿದೆ ಎಂದಿದ್ದಾರೆ.




