ಕಾವೇರಿ ವಿವಾದದ ಬಿಸಿ: ಮಂಡ್ಯದಲ್ಲಿ ವಿಜಯ್ ನಟನೆಯ ‘ಜನನಾಯಗನ್’ ಪ್ರದರ್ಶನ ರದ್ದು

Share with

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರ ಮತ್ತೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇದರ ನಡುವೆಯೇ ನಟ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ವಿಜಯ್ ಅಭಿನಯದ ‘ಜನನಾಯಗನ್’ ಚಿತ್ರದ ಪ್ರದರ್ಶನವನ್ನು ಮಂಡ್ಯದಲ್ಲಿ ರದ್ದುಗೊಳಿಸಲಾಗಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಮಂಡ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರದ ಪ್ರಸಿದ್ಧ ಗುರುಶ್ರೀ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ತಮಿಳು ಚಿತ್ರ ‘ಜನನಾಯಗನ್’ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *