ಉಡುಪಿ: ಬಿಸಿಲಿನ ತಾಪದಿಂದ ತತ್ತರಿಸಿದ್ದ ಉಡುಪಿ ಜನತೆಗೆ ವರ್ಷಾಧಾರೆ ತಂಪೆರೆದಿದೆ. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ, ಪಡುಬಿದ್ರೆ, ಕಾಪು, ಶಿರ್ವ, ಕಾರ್ಕಳ, ಬೈಲೂರು, ಕುಂದಾಪುರ, ಬ್ರಹ್ಮಾವರ, ಬೈಂದೂರು ಮೊದಲಾದ ಭಾಗಗಳಲ್ಲಿ ಇಂದು ಮುಂಜಾನೆ 2 ಗಂಟೆಗೂ ಅಧಿಕ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಾಳೆ ಸುರಿದಿದೆ.
ಉಡುಪಿಯ ಕೆಲ ಭಾಗಗಳಲ್ಲಿ ಬೆಳಿಗ್ಗೆ 7 ಗಂಟೆಯ ನಂತರವೂ ಮಳೆ ಸುರಿಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಗಾಳಿ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪರಿಣಾಮ ರಾತ್ರಿ ಸ್ಥಗಿತಗೊಂಡಿದ್ದ ವಿದ್ಯುತ್ ಪೂರೈಕೆ ಬೆಳಗ್ಗೆವರೆಗೂ ವ್ಯತ್ಯಯವಾಗಿತ್ತು. ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಕೆಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.