
ಉಡುಪಿ/ದ.ಕ: ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ತಾಪ ಕಡಿಮೆಯಾಗಿದ್ದು, ವರುಣನ ಆಗಮನ ಆರಂಭವಾಗಿದೆ. ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ. ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಪ್ರದೇಶಗಳಲ್ಲಿ ಸುಂಟರಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ನೀರಿಗೆ ಇಳಿಯದಂತೆ ತೀವ್ರ ಎಚ್ಚರಿಕೆ ನೀಡಲಾಗಿದೆ. ದ.ಕ, ಉಡುಪಿ ಪ್ರದೇಶದಲ್ಲೂ ಇಂದು ಹಠಾತ್ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
ಉಡುಪಿ, ಮಣಿಪಾಲ, ಇಂದ್ರಾಳಿ, ಪರ್ಕಳ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ವಾಹನ ಸಂಚಾರಕ್ಕೂ ಸ್ವಲ್ಪ ಮಟ್ಟಿಗೆ ಅಡಚಣೆಯಾಗಿದೆ.