ಕಾಸರಗೋಡು: ಕೇರಳದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ಕೇರಳದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಚಂಡಮಾರುತವು ವಾಯುವ್ಯ ಬಂಗಾಳಕೊಲ್ಲಿ ಮತ್ತು ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾದ ಕರಾವಳಿಯಲ್ಲಿ ಕೇಂದ್ರೀಕೃತವಾಗಿದೆ.
ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಜೂ. 26ರಂದು ಪ್ರತ್ಯೇಕ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ. ಜೂ. 28ರ ವರೆಗೆ ಪ್ರತ್ಯೇಕ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಜೂ. 26ರಿಂದ 28ರ ವರೆಗೆ ಕೇರಳದಲ್ಲಿ ಗರಿಷ್ಠ ಗಂಟೆಗೆ 40ರಿಂದ 50ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಎಚ್ಚರದಿಂದಿರಬೇಕೆಂದು ತಿಳಿಸಿದೆ. ಏತನ್ಮಧ್ಯೆ ರಾಜ್ಯದ ಮಲಬಾರ್ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಇಡುಕ್ಕಿಯ ಗುಡ್ಡಗಾಡು ಪ್ರದೇಶಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ಆರೆಂಜ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ ಇಡುಕ್ಕಿಯಲ್ಲಿ ನಿರ್ಬಂಧ ಹೇರಲಾಗಿದೆ.
ಆರೆಂಜ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ ಇಡುಕ್ಕಿಯಲ್ಲಿ ನಿರ್ಬಂಧ ಹೇರಲಾಗಿದೆ. ಜೂ. 25 ಮತ್ತು 26ರಂದು ಜಲ ಕ್ರೀಡೆ ಮತ್ತು ಸಾಹಸ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಲಾಗಿದೆ. ಇಡುಕ್ಕಿಯಲ್ಲಿಯೂ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.