ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ: ಜನಜೀವನದ ಮೇಲೆ ಮಳೆರಾಯನ ಹೊಡೆತ

Share with


ಹಾಸನ : ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ನಿರಂತರ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲೆಲ್ಲ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ರಸ್ತೆಯಲ್ಲಿ ಸಂಚರಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರು ಹಾಗೂ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಮಳೆ ಇನ್ನಷ್ಟು ಮುಂದುವರಿದರೆ ಜನರ ದೈನಂದಿನ ಚಟುವಟಿಕೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.


Share with

Leave a Reply

Your email address will not be published. Required fields are marked *