
ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆಯನ್ನು ಇಲಾಖೆ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು, ಆಂಧ್ರಪ್ರದೇಶ ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.




