ರಾಜ್ಯದ ಹಲವೆಡೆ ಮುಂದಿನ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂ. ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ & ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ.




