ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

Share with

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ. ಹೀಗಾಗಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 01 ರವರೆಗೆ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ವ್ಯಾಪಕ ಸಾಧಾರಣದಿಂದ ಭಾರೀ ಮಳೆ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ಕರಾವಳಿಯಲ್ಲಿ 40-45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಮುಂದಿನ 3 ದಿನಗಳಲ್ಲಿ (ಅ.2 ವರೆಗೆ) ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಆರೆಂಜ್ ಅಲರ್ಟ್: ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಸೆ.29ರಿಂದ ಸೆ.30ರ ಬೆಳಗ್ಗಿನವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ.


Share with

Leave a Reply

Your email address will not be published. Required fields are marked *