ದ.ಕ: ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಗೆ ಜಿಲ್ಲೆಯಾದ್ಯಂತ ಜು.25 ರಂದು ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.