ಉಡುಪಿ: ರಸ್ತೆ ಅಗಲೀಕರಣ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಿಪಡಿಸಿರುವ ಘಟನೆ ಖಂಡಿಸಿ ಸ್ಥಳೀಯರು
ಕೊಲ್ಲೂರು-ಧರ್ಮಸ್ಥಳ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಹೆಬ್ರಿ ತಾಲೂಕಿನ ಮಠದ ಬೆಟ್ಟು ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಗಲ ಹಾಗೂ ಕಿರಿದಾದ ರಸ್ತೆಯಿಂದ ನಿತ್ಯವೂ ವಾಹನ ಸವಾರರಿಗೆ ಸಮಸ್ಯೆ ಆಗುತ್ತಿದ್ದು, ರಾಜ್ಯ ಹೆದ್ದಾರಿಯಲ್ಲಿ ನಿರಂತರ ರಸ್ತೆ ಅಪಘಾತ ನಡೆಯುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಅಪಘಾತದಲ್ಲಿ ಸ್ಥಳೀಯ ಯುವಕನೋರ್ವ ಗಂಭೀರ ಗಾಯಗೊಂಡಿದ್ದನು. ನಿತ್ಯವೂ ಅಪಘಾತಗಳು ನಡೆಯುತ್ತಿರುವುದರಿಂದ ರಸ್ತೆ ಅಗಲೀಕರಣ ಮಾಡುವಂತೆ ಸ್ಥಳೀಯರ ಒತ್ತಾಯ ಮಾಡಿದ್ದರು. ಆದರೆ, ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆಯಿಂದ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯ ಅರಣ್ಯ ಅಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಂದ ಪ್ರತಿಭಟನೆ ಹಿಂತೆಗೆಯುವಂತೆ ಮನವಿ ಮಾಡಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಬರುವಂತೆ ಪ್ರತಿಭಟನಕಾರರ ಒತ್ತಾಯ ಮಾಡಿದರು.