ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್ ಉಲ್ಬಣಗೊಳ್ಳುತ್ತಿದ್ದು, ರಾಜ್ಯದಲ್ಲೂ ಆತಂಕ ಹೆಚ್ಚಿದೆ. ಇದೀಗ ಗಡಿ ಜಿಲ್ಲೆಗಳಾದ ದ. ಕನ್ನಡ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಚೆಕ್ ಪೋಸ್ಟ್ ಮೂಲಕ ತೆರಳುವವರಿಗೆ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.
ಜಿಲ್ಲಾ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್ಗಳನ್ನು ಸ್ಥಾಪಿಸಲಾಗಿದ್ದು, ನಿಫಾ ವೈರಸ್ ಚಿಕಿತ್ಸೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ.