ಬೆಂಗಳೂರು: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ​ಅನುಮತಿ

Share with

ಬೆಂಗಳೂರು: ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ​ಅನುಮತಿ ನೀಡಿ ಮಾ.7ರಂದು ಆದೇಶ ಹೊರಡಿಸಿದೆ.

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ​ಅನುಮತಿ

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9,11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ಮಾ.6ರಂದು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಹೀಗಾಗಿ ನಿಗದಿಯಂತೆ ಮಾ.11ರಿಂದ 5, 8, 9, 11 ತರಗತಿಗಳಿಗೆ ಬೋರ್ಡ್ ಎಕ್ಸಾಮ್ ನಡೆಯಲಿವೆ.


Share with

Leave a Reply

Your email address will not be published. Required fields are marked *